ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ| ಎನ್.ವಿ.ರಮಣ ನೇಮಕ
Prasthutha: April 6, 2021

ಹೊಸದಿಲ್ಲಿ : ಸುಪ್ರಿಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ| ಎನ್ ವಿ ರಮಣ ಅವರನ್ನು ನೇಮಕ ಮಾಡಲು ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ. ತಮ್ಮ ಉತ್ತರಾಧಿಕಾರಿಯಾಗಲು ಆಂಧ್ರ ಮೂಲದ ಹಿರಿಯ ನ್ಯಾಯಮೂರ್ತಿ ಎನ್ ವಿ ರಮಣ ಅವರ ಹೆಸರನ್ನು ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಬ್ಡೆ ಶಿಫಾರಸು ಮಾಡಿದ್ದರು.
ಸಿಜೆಐ ಎಸ್.ಎ. ಬೋಬ್ಡೆ ಏಪ್ರಿಲ್ 23 ರಂದು ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿ ನೇಮಕಕ್ಕೆ ಶಿಫಾರಸು ಮಾಡಲಾಗಿತ್ತು. ನ್ಯಾಯಮೂರ್ತಿ ಎನ್.ವಿ. ರಮಣ ಅವರು ನ್ಯಾಯಮೂರ್ತಿಯಾಗಿ 2022 ರ ಆಗಸ್ಟ್ 26 ರವರೆಗೆ ಇರಲಿದ್ದಾರೆ.
