“ಹಠ ಬಿಟ್ಟು ಕೆಲಸಕ್ಕೆ ಹಾಜರಾಗಿ” : ಸಾರಿಗೆ ನೌಕರರಿಗೆ ಮುಖ್ಯಮಂತ್ರಿ ಮತ್ತೊಮ್ಮೆ ಮನವಿ

Prasthutha|

ಬೆಂಗಳೂರು : ಬೇಡಿಕೆ ಈಡೇರಿಕೆಗೆ ಹಠ ಮಾಡುವುದು ಸರಿಯಲ್ಲ. ಯಾರ ಮಾತನ್ನೋ ಕೇಳಿ ನೀವು ಬಲಿಯಾಗಬೇಡಿ. ಈಗಾಗಲೇ ಸಾರಿಗೆ ನೌಕರರ 8 ಬೇಡಿಕೆಗಳನ್ನು ಈಡೇರಿಸಲಾಗಿದೆ. ಇದರ ಹೊರತಾಗಿ 6ನೇ ವೇತನ ಆಯೋಗದ ಶಿಫಾರಸ್ಸು ಮಾಡೋದಿಲ್ಲ. ದಯವಿಟ್ಟು ಕೆಲಸಕ್ಕೆ ಹಾಜರಾಗಿ ಎಂದು 6ನೇ ವೇತನ ಆಯೋಗದ ಶಿಫಾರಸ್ಸನ್ನು ಮಾಡಲು ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಆಗೇ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆಗಳನ್ನು ಈಡೇರಿಸಲಾಗಿದೆ. ಆದ್ರೇ 6ನೇ ವೇತನ ಆಯೋಗದ ಶಿಫಾರಸ್ಸನ್ನು ಮಾಡಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡುವ ಮೂಲಕ ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದ್ದಾರೆ.

- Advertisement -

ಇಂದಿಗೆ ಮೂರನೇ ದಿನಕ್ಕೆ ಸಾರಿಗೆ ನೌಕರರ ಮುಷ್ಕರ ಕಾಲಿಟ್ಟಿದೆ. ರಾಜ್ಯ ಸರ್ಕಾರ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಸ್ಪಂದನೆ ನೀಡದಿದ್ದರೆ ಸಾರಿಗೆ ನೌಕರರು ಮುಷ್ಕರ ಕೈಬಿಡೋದಿಲ್ಲ ಎಂಬ ಹಠಕ್ಕೆ ಬಿದ್ದು ಮುಂದುವರೆಸಿದ್ದಾರೆ. ಸಾರಿಗೆ ನೌಕರರ ಪ್ರತಿಭಟನೆಯಿಂದಾಗಿ ಸಾರಿಗೆ ಬಸ್ ಸಂಚಾರ ಸ್ಥಗಿತಗೊಂಡು ಬಸ್ ಗಳಿಲ್ಲದೇ ಪ್ರಯಾಣಿಕರು ಪರದಾಡುತ್ತಿದ್ದಾರೆ.

ರಾಜ್ಯ ಸರ್ಕಾರ ಬೇಡಿಕೆ ಈಡೇರಿಸುವ ಬದಲು ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲು ಮುಂದಾಗಿದೆ. ಇದಕ್ಕಾಗಿ ಈಗಾಗಲೇ 2 ವರ್ಷಗಳ ಹಿಂದೆ ನಿವೃತ್ತರಾದ ಸಾರಿಗೆ ನೌಕರರನ್ನು ಮತ್ತೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.

- Advertisement -