Home ಟಾಪ್ ಸುದ್ದಿಗಳು ಬೆಂಗಳೂರಿನಿಂದ ಪುಣೆಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರಿನಿಂದ ಪುಣೆಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಮಹಾರಾಷ್ಟ್ರದ ಪುಣೆ ಪ್ರವಾಸ ಕೈಗೊಂಡಿದ್ದಾರೆ.

ಇಂದು ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಪುಣೆಗೆ ಸಿಎಂ ಬಸವರಾಜ ಬೊಮ್ಮಾಯಿ ತೆರಳಿದರು.

ಪುಣೆಯಲ್ಲಿ ಬಂಟರ ಸಂಘದಿಂದ ಆಯೋಜಿಸಲಾಗಿರುವ ಸೇವಾಸಾಧಕರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಾಗೂ ಅಖಿಲ ಭಾರತ ಬ್ರಾಹ್ಮಣ ಮಹಾಸಂಘದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಸಂಜೆ ಪುಣೆಯಿಂದ ಬೆಂಗಳೂರಿಗೆ ವಿಶೇಷ ವಿಮಾನದ ಮೂಲಕ ಮರಳಲಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Join Whatsapp
Exit mobile version