ಪೀರ್ ಪಾಷಾ ದರ್ಗಾ ಕುರಿತು ಪುರಾತತ್ವ ಇಲಾಖೆಯಿಂದ ಪರಿಶೀಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Prasthutha|

ಬೆಂಗಳೂರು: ಪಠ್ಯ ಪರಿಷ್ಕರಣೆ ಸಮಿತಿ ವಿಸರ್ಜನೆ ಮೊದಲ ಬಾರಿ ಆಗುತ್ತಿಲ್ಲ. ಸಿದ್ದರಾಮಯ್ಯ ಅವರು  ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

- Advertisement -

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಈ ಬಗ್ಗೆ ಹಲವಾರು ಬಾರಿ ಬದಲಾವಣೆಗಳಾಗಿವೆ. ಅವರ ಕಾಲದಲ್ಲಿಯೂ ಹೀಗೆ ಆಗಿದೆ. ಆಗೇನು ಅವರು ಪಠ್ಯ ಪುಸ್ತಕ ಪರಿಷ್ಕರಣೆ ಹಿಂದೆಗೆದುಕೊಂಡರೆ? ಸುಮ್ಮನೆ ಗೊಂದಲ ಸೃಷ್ಟಿ ಮಾಡಬಾರದು. ನಾವು ಈ ಬಗ್ಗೆ ಮುಕ್ತವಾಗಿದ್ದೇವೆ.  ತಪ್ಪುಗಳನ್ನು ಸರಿಪಡಿಸಲು ಸಿದ್ಧರಿದ್ದೇವೆ. ಅದ್ಯಾವುದರ ಬಗ್ಗೆಯೇ ಆಗಲಿ ಸರಿಪಡಿಸಿ ಮರುಮುದ್ರಣ ಮಾಡಲಾಗುವುದು ಎಂದರು.

- Advertisement -

ಪೀರ್ ಪಾಷಾ ದರ್ಗಾ ಕುರಿತು ಸಂಶೋಧನೆ ಮಾಡುವಂತೆ ಸ್ವಾಮೀಜಿಗಳು ಮನವಿ ನೀಡಿದ್ದಾರೆ ಪುರಾತತ್ವ ಇಲಾಖೆ ಪರಿಶೀಲನೆ ನಡೆಸಲಿದೆ ಎಂದು ಮುಖ್ಯಮಂತ್ರಿ ಗಳು ತಿಳಿಸಿದರು.

ಕೋವಿಡ್ ನಿಯಂತ್ರಣದಲ್ಲಿದೆ; ಗಾಬರಿ ಬೇಡ:

ಕೋವಿಡ್ ಸಂಪೂರ್ಣ ನಿಯಂತ್ರಣದಲ್ಲಿದೆ. ಅನಗತ್ಯವಾಗಿ  ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಸಭೆ ನಡೆಸಿ ಎಲ್ಲಾ ಜಿಲ್ಲೆಗಳಲ್ಲಿನ ಪರಿಸ್ಥಿತಿಯ ಬಗ್ಗೆ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದ ಮೇಲೆ 2-3 ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Join Whatsapp