ಲ್ಯಾಪ್ ಟಾಪ್ ವಿತರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬೊಮ್ಮಾಯಿ ಕಾರು ತಡೆದ ವಿದ್ಯಾರ್ಥಿಗಳು

Prasthutha|

ಬೆಳಗಾವಿ: ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡುವಂತೆ ಒತ್ತಾಯಿಸಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರನ್ನು ತಡೆದು ಪ್ರತಿಭಟಿಸಿದ ಘಟನೆ ಹಿರೇಬಾಗೇವಾಡಿಯಲ್ಲಿ ನಡೆದಿದೆ.

- Advertisement -

ಬುಧವಾರ ಮುಖ್ಯಮಂತ್ರಿ ಬೊಮ್ಮಾಯಿ ಹಿರೇ ಬಾಗೇವಾಡಿಯಲ್ಲಿ ಆಯೋಜಿಸಲಾಗಿದ್ದ ವಿಶ್ವವಿದ್ಯಾಲಯದ ನೂತನ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಲು ಕಾರಿನಲ್ಲಿ ತೆರಳಿದಾಗ ಈ ಘಟನೆ ನಡೆದಿದೆ.

ವಿದ್ಯಾರ್ಥಿಗಳಿಗೆ ತಕ್ಷಣ ಲ್ಯಾಪ್ ಟಾಪ್ ವಿತರಿಸಿ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿಯ ಕಾರು ತಡೆದು ಘೋಷಣೆ ಕೂಗಿದರು.
ಒಂದು ವರ್ಷದ ಹಿಂದೆ ಯೋಜನೆಯನ್ನು ಘೋಷಿಸಿದ್ದರೂ ರಾಜ್ಯ ಸರ್ಕಾರ ಇನ್ನೂ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ಅಸೈನ್ ಮೆಂಟ್ ಗಳನ್ನು ಪೂರ್ಣಗೊಳಿಸಲು ಲ್ಯಾಪ್ ಟಾಪ್ ಅಗತ್ಯವಿದೆ ಎಂದು ಹೇಳಿದರು.

- Advertisement -

ಎಸ್ಸಿ/ಎಸ್ಟಿ/ಒಬಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪುನರಾರಂಭಿಸಬೇಕು, ಸರಿಯಾದ ಹಾಸ್ಟೆಲ್ ಸೌಲಭ್ಯಗಳು, ಶಿಕ್ಷಕರು ಮತ್ತು ಸಿಬ್ಬಂದಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಈ ವೇಳೆ ವಿದ್ಯಾರ್ಥಿಗಳು ಮುಖ್ಯಮಂತ್ರಿಯ ಗಮನಕ್ಕೆ ತಂದರು. ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ಬೇಡಿಕೆ ಈಡೇರಿಸುವುದಾಗಿ ಸಿಎಂ ಭರವಸೆ ನೀಡಿದರು.



Join Whatsapp