ಮಂಗಳೂರು: ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಭೇಟಿ ಹಾಗೂ ಪರಿಶೀಲನೆಗಾಗಿ ಎರಡು ದಿನ ಕೊಡಗು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರವಾಸ ಮುಗಿಸಿ ಬುಧವಾರ ಸಂಜೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಿದರು. ಜೊತೆಗೆ ಕಂದಾಯ ಸಚಿವ ಆರ್. ಅಶೋಕ್ ಅವರು ಕೂಡಾ ಇದ್ದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ್ ಕಾಮತ್, ಹರೀಶ್ ಪೂಂಜ, ಉಮಾನಾಥ್ ಕೋಟ್ಯಾನ್, ಸಂಜೀವ ಮಠಂದೂರು ಹಾಗೂ ರಾಜೇಶ್ ನಾಯ್ಕ್ , ಜಿಲ್ಲಾಧಿಕಾರಿ ಡಾ.ರಾಜೇಂದ್ರ, ಎಸ್ಪಿ ಋಷಿಕೇಷ್ ಭಗವಾನ್ ಸೋನಾವಣೆ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.