ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಮಳೆ ಹಿನ್ನೆಲೆ: ಪರಿಹಾರ, ರಕ್ಷಣಾ ಕಾರ್ಯಗಳಿಗೆ ಕ್ರಮ- ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಅಧಿಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

- Advertisement -

ಅವರು ಇಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ ಹಲವೆಡೆ ಹಾಗೂ ಕರಾವಳಿ ಭಾಗದಲ್ಲಿ ಪುನ: ಹೆಚ್ಚು ಮಳೆಯಾಗುತ್ತಿದೆ. ಮಳೆ ಅನಾಹುತದಿಂದ ಸಾವು ನೋವುಗಳಾಗಿದ್ದು, ಈ ಬಗ್ಗೆ ಇಂದು ಸಭೆ ನಡೆಸಲಾಗುವುದು. ಹೆಚ್ಚು ಮಳೆಯಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

- Advertisement -

ರಾಜ್ಯದಲ್ಲಿ ಕಾಣಿಸಿಕೊಳ್ಳುತ್ತಿರುವ ಮಂಕಿಪಾಕ್ಸ್ ಸೋಂಕು ನಿಯಂತ್ರಣದ ಬಗ್ಗೆಯೂ ಸಭೆ ನಡೆಸಲಾಗುವುದು.

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಸಿಐಐಎ ನ ಕಲ್ಚರಲ್ ವಿಂಗ್ ನ ಸಭೆಗಾಗಿ ಆಗಸ್ಟ್ 4 ರಂದು ಬೆಂಗಳೂರಿಗೆ ಆಗಮಿಸುತ್ತಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Join Whatsapp