ಆಶ್ರಯ ಯೋಜನೆ ಆಯ್ಕೆಗೆ ವರಮಾನ ಮಿತಿ ಹೆಚ್ಚಳಕ್ಕೆ ಮುಖ್ಯಮಂತ್ರಿ ನಿರ್ದೇಶನ: ಆರಗ ಜ್ಞಾನೇಂದ್ರ

Prasthutha: January 28, 2022

ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಆಶ್ರಯ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳ ಆಯ್ಕೆಗೆ ಇರುವ ವಾರ್ಷಿಕ ವರಮಾನ ಮಿತಿಯನ್ನು ರೂಪಾಯಿ 1.20 ಲಕ್ಷಕ್ಕೆ ಹೆಚ್ಚಿಸಲು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿರ್ದೇಶಿಸಿ ದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವರಮಾನ ಮಿತಿ ಹೆಚ್ಚಿಸುವಂತೆ, ವಸವಿ ವಂಚಿತ ಬಡವರು ಮನವಿ ಸಲ್ಲಿಸುತ್ತಾ ಬಂದಿದ್ದು, ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ, ಹಾಗೂ ಮುಖ್ಯಮಂತ್ರಿಗಳು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಕೇಂದ್ರ ಸರಕಾರವು ಬಿಪಿಎಲ್ ಕಾರ್ಡುದಾರರ ವರಮಾನ ಮಿತಿಯನ್ನು ರೂಪಾಯಿ 1.20 ಲಕ್ಷಕ್ಕೆ ಈಗಾಗಲೇ ಹೆಚ್ಚಿಸಿದೆ. ಆದರೆ ರಾಜ್ಯದಲ್ಲಿ, ಆಶ್ರಯ ಯೋಜನೆ ಫಲಾನುಭವಿಗಳಿಗೆ ವರಮಾನ ಮಿತಿ ರೂಪಾಯಿ 32,000 ದಷ್ಟಿದ್ದು, ಹೆಚ್ಚಿನ ಅರ್ಹರು ಯೋಜನೆಯ ಲಾಭ ಪಡೆಯುವುದರಿಂದ ವಂಚಿತರಾಗಿದ್ದಾರೆ ಎಂದರು.

ತನ್ನ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು, ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ವಸತಿ ಖಾತೆಯ ಕಾರ್ಯದರ್ಶಿಗಳಿಗೆ ಸೂಕ್ತ ನಿರ್ದೇಶನ ನೀಡಿದರು ಎಂದು ಸಚಿವರು ತಿಳಿಸಿದರು.

ಮುಖ್ಯಮಂತ್ರಿಗಳ ನಿರ್ಧಾರದಿಂದ ಲಕ್ಷಾಂತರ ಮಂದಿ ವಸತಿ ವಂಚಿತ ಬಡವರು ಪ್ರಯೋಜನ, ಪಡೆಯಲಿದ್ದಾರೆ, ಎಂದು ಸಚಿವರು ತಿಳಿಸಿದ್ದಾರೆ. ಸಕಾರಾತ್ಮಕ ವಾಗಿ ಸಮಸ್ಯೆಗೆ ಸ್ಪಂದಿಸಿದ ಮುಖ್ಯಮಂತ್ರಿಗಳಿಗೆ ಸಚಿವರು ಕೃತಜ್ಞತೆ ಸಲ್ಲಿಸಿದ್ದಾರೆ

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!