Home ಟಾಪ್ ಸುದ್ದಿಗಳು ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಮುಖ್ಯಮಂತ್ರಿ ಆಗುತ್ತೇನೆ: ಆರ್.ವಿ.ದೇಶಪಾಂಡೆ

ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಮುಖ್ಯಮಂತ್ರಿ ಆಗುತ್ತೇನೆ: ಆರ್.ವಿ.ದೇಶಪಾಂಡೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗ್ತೀನಿ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್.ವಿ ದೇಶಪಾಂಡೆ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

ಈ ಮೂಲಕ ಪರೋಕ್ಷವಾಗಿ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ. ನಾನು ಸಚಿವ ಆಗಿ ದಣಿದಿದ್ದೇನೆ. ಇನ್ನೇನಿದ್ದರೂ ಮುಖ್ಯಮಂತ್ರಿ ಆಗಬೇಕು ಅಷ್ಟೇ. ಆದ್ರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ನನಗೆ ಆಸೆ ಇದೆ. ನಿಮ್ಮಂಥ ಜನರಿಗೂ ಆಸೆ ಇರುತ್ತೆ. ಲೈಫ್‌ನಲ್ಲಿ ಗುರಿ ಮುಖ್ಯ. ನಾನು ಸಿದ್ದರಾಮಯ್ಯಗಿಂತ 2 ವರ್ಷ ವಯಸ್ಸಿನಲ್ಲಿ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ಟರೂ ಸಿದ್ದರಾಮಯ್ಯ ಅನುಮತಿ ಕೊಡಬೇಕು. ನಾನು ಸಿದ್ದರಾಮಯ್ಯಗೆ ಒಳ್ಳೆಯ ಸ್ನೇಹಿತ. 5 ವರ್ಷ ಸಿಎಂ ಆಗಿ ಅವರೇ ಇರ್ತಾರೆ ಎಂದು ಹೇಳಿದ್ದಾರೆ.

Join Whatsapp
Exit mobile version