ಕಾವೇರಿ, ಮೇಕೆದಾಟು ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಮುಖ್ಯಮಂತ್ರಿ ಕ್ರಮ

Prasthutha|

ಬೆಂಗಳೂರು: ಕಾವೇರಿ ಮೇಕೆದಾಟು ಪಾದಯಾತ್ರೆಯ ಸಂದರ್ಭದಲ್ಲಿ ದಾಖಲಾದ  ಪ್ರಕರಣಗಳನ್ನು ಹಿಂಪಡೆಯಲು ಸಿಎಂ ಸಿದ್ದರಾಮಯ್ಯ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.. ಈ ಪ್ರಕರಣಗಳ ಕಡತ ಸಂಪುಟ ಉಪ ಸಮಿತಿಯ ಮುಂದೆ ತಂದು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

- Advertisement -

ಕಾವೇರಿ ಮೇಕೆದಾಟು ಪಾದಯಾತ್ರೆ ಸೇರಿ ನಾಡಿನ ರಕ್ಷಣೆಗೆ ನಡೆದ ಹೋರಾಟವಾಗಿದೆ. ಹೋರಾಟಗಾರರ ಮೇಲಿನ ಕೇಸ್ ಗಳನ್ನು ಹಿಂಪಡೆಯುವಂತೆ ಎಂಎಲ್ಸಿ ದಿನೇಶ್ ಗೂಳಿಗೌಡ ಬರೆದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ.

ಹೋರಾಟವನ್ನು ನಿಯಂತ್ರಿಸುವುದಕ್ಕಾಗಿ ಹಿಂದಿನ ಬಿಜೆಪಿ ಸರ್ಕಾರವು ಹೋರಾಟಗಾರರು, ಮಾಜಿ ಶಾಸಕರು, ಹಾಲಿ ಶಾಸಕರು, ರೈತ ಹೋರಾಟಗಾರರು, ರಾಜಕೀಯ ನಾಯಕರು ಸೇರಿದಂತೆ ವಿವಿಧ ಮಂದಿಯ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿತ್ತು. ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸಿದ್ದ ಕಾಂಗ್ರೆಸ್ ಮುಖಂಡರ ಮೇಲೂ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿತ್ತು. ಇದರಿಂದಾಗಿ ಅನೇಕ ಮಂದಿ ವಿನಾಕಾರಣ ನ್ಯಾಯಾಲಯಗಳಲ್ಲಿ ಅಲೆದಾಡುವಂತೆ ಆಗಿದೆ. ಹೀಗಾಗಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಗೂಳಿಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದರು.

Join Whatsapp