ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಜಮೀರ್ ಅಹ್ಮದ್ ಖಾನ್ ಉಪಸ್ಥಿತರಿದ್ದಾರೆ.