ಬೆಂಗಳೂರು : ಪಂಚರಾಜ್ಯ ಚುನಾವಣೆ ಫಲಿತಾಂಶ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆ ಎಂಬುದು ಕೇವಲ ಊಹಾಪೋಹ. ಬಸವರಾಜ ಬೊಮ್ಮಾಯಿ ಅವರೇ ಈ ಸರ್ಕಾರದ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಬದಲಾವಣೆ ಸುದ್ದಿಗಳಲ್ಲಿ ಯಾವುದೇ ನೈಜತೆಯಿಲ್ಲ ಎಂದರು.
ಪಂಚ ರಾಜ್ಯಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಜಯಗಳಿಸಿದ್ದು ಪ್ರಧಾನಿ ನರೇಂದ್ರ ಮೋದಿ ನಾಯಕತ್ವಕ್ಕೆ ಸಿಕ್ಕ ಜಯವಾಗಿದೆ. ಈ ಫಲಿತಾಂಶ ಕರ್ನಾಟಕದಲ್ಲಿ ಮುಂದೆ ನಡೆಯುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದರು