ಚಿಕ್ಕಬಳ್ಳಾಪುರ: ಅಂಗನವಾಡಿ ಕೇಂದ್ರ ವಿತರಿಸಿದ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆ

Prasthutha|

ಗುಡಿಬಂಡೆ: ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ವಿತರಿಸಲಾದ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗರುಡಾಚಾರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

- Advertisement -

ಗರ್ಭಿಣಿಯರು, ಬಾಣಂತಿಯರಿಗೆ ಅಂಗನವಾಡಿ ಕೇಂದ್ರದಲ್ಲಿ ವಿತರಿಸಲಾದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆಯಾಗಿತ್ತು.

ಗರುಡಾಚಾರ್ಲಹಳ್ಳಿ ಗ್ರಾಮದ ನಿವಾಸಿ ರತ್ನಮ್ಮ ಎಂಬುವರಿಗೆ ನೀಡಿದ ಎರಡು ಬೆಲ್ಲದ ಪೊಟ್ಟಣಗಳ ಪೈಕಿ ಒಂದರಲ್ಲಿ ಈ ಸತ್ತ ಇಲಿ ಕಂಡುಬಂದಿವೆ. ಕೂಡಲೇ ಅವರು ಪೊಟ್ಟಣಗಳನ್ನು ಅಂಗನವಾಡಿ ಕಾರ್ಯಕರ್ತೆ ಗಮನಕ್ಕೆ ತಂದಿದ್ದಾರೆ.

- Advertisement -

ಬೆಲ್ಲದ ಮೂಟೆಗಳನ್ನು ಬಾಗೇಪಲ್ಲಿ ತಾಲ್ಲೂಕಿನ ಯಲ್ಲಂಪಲ್ಲಿ ಎಂ.ಎಸ್.ಪಿ.ಸಿ ಯವರು ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಾರೆ. ನಾವು ಅವನ್ನು ವಿತರಿಸಿದ್ದೇವೆ ಅಷ್ಟೇ. ಪ್ಯಾಕೆಟ್ ಒಳಗೆ ಇಲಿ ಸತ್ತಿರುವುದಕ್ಕೂ ನಮಗೂ ಸಂಬಂಧವಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆ ಭಾಗ್ಯಮ್ಮ ಪ್ರತಿಕ್ರಿಯಿಸಿದ್ದಾರೆ.

ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿರುವವರ ಮೇಲೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಲು ಗ್ರಾಮಸ್ಥರು ಮನವಿ ಮಾಡಿದ್ದಾರೆ.



Join Whatsapp