ಚಿಕ್ಕಬಳ್ಳಾಪುರ ಅಪಘಾತ: ಮೃತರ ಸಂಖ್ಯೆ 13ಕ್ಕೆ ಏರಿಕೆ

Prasthutha|

- Advertisement -

ಚಿಕ್ಕಬಳ್ಳಾಪುರದಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ ಆಗಿದೆ.

ಇಂದು ಮುಂಜಾನೆ 7 ಗಂಟೆಗೆ ತಾಲೂಕಿನ ಚಿತ್ರಾವತಿ ಬಳಿಯ ಆರ್​​ಟಿಒ ಕಚೇರಿ‌ ಸಮೀಪ ಹೆದ್ದಾರಿ ಬದಿ ನಿಂತಿದ್ದ ಸಿಮೆಂಟ್ ಬಲ್ಕರ್​ ದೈತ್ಯ ಲಾರಿಗೆ ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಾಟಾ ಸುಮೊ ಡಿಕ್ಕಿಯಾಗಿತ್ತು. ವೇಗವಾಗಿ ಗುದ್ದಿದ ಸುಮೋದಲ್ಲಿದ್ದ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ‌. ಮೃತರಲ್ಲಿ 8 ಜನ ಪುರುಷರು, 4 ಮಹಿಳೆಯರು ಹಾಗುಒಂದು ಮಗು ಸೇರಿದೆ. ಮೃತರೆಲ್ಲರೂ ಆಂಧ್ರಪ್ರದೇಶದ ಶ್ರೀಸತ್ಯಸಾಯಿ ಜಿಲ್ಲೆಯ ಗೋರಂಟ್ಲ ಗ್ರಾಮದವರು ಎಂದು ಹೇಳಲಾಗಿದೆ.

- Advertisement -

ಮೃತರಲ್ಲಿ ಆಂಧ್ರಪ್ರದೇಶದ ಕೊತ್ತಚೆರವು ಗ್ರಾಮದ ಪೆರಿಮಿಲಿ ಹಾಗೂ‌ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸುಬ್ಬಮ್ಮ, ದೊಡ್ಡಬಳ್ಳಾಪುರದ ಅರುಣಾ‌ ಎಂಬವರ ಗುರುತು ಪತ್ತೆ ಹಚ್ಚಲಾಗಿದೆ. ಉಳಿದವರ ಗುರುತು ಇನ್ನೂ ಕಲೆ ಹಾಕಲಾಗುತ್ತಿದೆ.

ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಹಾಗೂ ಜಿಲ್ಲಾ ಎಸ್ಪಿ ಡಿಎಲ್‌ ನಾಗೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಸ್ಪಿ ಡಿಎನ್​ ನಾಗೇಶ್​ ಪ್ರತಿಕ್ರಿಯಿಸಿ, 13 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಮಂಜು ಕವಿದ ವಾತಾವರಣ ಇದ್ದಿದ್ದರಿಂದ ಅಪಘಾತ ಸಂಭವಿಸಿರಬಹುದು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Join Whatsapp
Exit mobile version