ಚಿಕ್ಕಬಳ್ಳಾಪುರ: ವ್ಯಕ್ತಿಯೋರ್ವ ಅತ್ತಿಗೆಯ ಬೆಡ್ರೂಮ್ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ಘಟನೆ ಇಂದಿರಾನಗರದಲ್ಲಿ ನಡೆದಿದೆ.
ಆಂಜಿನಪ್ಪ(35) ಮೃತ ವ್ಯಕ್ತಿ. ಆಶಾ ಎಂಬುವವರು ಒಂಟಿಯಾಗಿದ್ದ ವೇಳೆ ಆಂಜಿನಪ್ಪ ಬೆಡ್ರೂಮ್ಗೆ ನುಗ್ಗಿದ್ದಾನೆ. ಕೂಡಲೇ ಎಚ್ಚೆತ್ತ ಮಹಿಳೆ ಮೈದುನನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮನೆಗೆ ಬಂದ ಮೈದುನ ರಾಘವೇಂದ್ರ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿ ಆಂಜಿನಪ್ಪನನ್ನು ಹತ್ಯೆ ಮಾಡಿದ್ದಾನೆ. ಬಳಿಕ ತಾನೇ ಹೋಗಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.