Home ಟಾಪ್ ಸುದ್ದಿಗಳು ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ: ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರು ಬರದಂತೆ ಜಿಲ್ಲಾಡಳಿತ ಮನವಿ

ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ: ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರು ಬರದಂತೆ ಜಿಲ್ಲಾಡಳಿತ ಮನವಿ

ಚಿಕ್ಕಮಗಳೂರು, ಆ, 2: ಕೊರೋನಾ ಸೋಂಕು ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರು ಬರದಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಜಿಲ್ಲೆಯಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಕೇರಳ, ಮಹಾರಾಷ್ಟ್ರಗಳಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿ. ಹೀಗಾಗಿ, ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ನಿಯಂತ್ರಣ ಅನಿವಾರ್ಯ ಎಂದು ಚಿಕ್ಕಮಗಳೂರು ಜಿಲ್ಲಾಡಳಿತ ಹೇಳಿದೆ.

ಅಲ್ಲದೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಪ್ರವಾಸಿಗರಲ್ಲಿ ಸೋಂಕು ಪತ್ತೆಯಾದರೆ ಚಿಕಿತ್ಸೆಯೂ ಕಷ್ಟ. ಈ ನಿಟ್ಟಿನಲ್ಲಿ ಪ್ರವಾಸಿಗರು ತಮ್ಮ ಪ್ರವಾಸ ಮುಂದೂಡುವುದು ಒಳ್ಳೆಯದು. ಪ್ರವಾಸಿಗರ ಭೇಟಿಗೆ 72 ಗಂಟೆಯೊಳಗಿನ ಆರ್ ಟಿ ಪಿ ಸಿ ಆರ್ ನೆಗೆಟಿವ್ ವರದಿ ಕಡ್ಡಾಯ. ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾಡಳಿತ ಹೇಳಿದೆ.

ಪ್ರವಾಸ ಮೊಟಕುಗೊಳಿಸಿ ಜಿಲ್ಲಾಡಳಿತಕ್ಕೆ ಸಹಕರಿಸಲು ಮನವಿ ಮಾಡಲಾಗಿದೆ. ಜಿಲ್ಲೆಯ ವಿವಿಧೆಡೆ ಐದು ಚೆಕ್ ಪೋಸ್ಟ್ ಸ್ಥಾಪಿಸಿ ತಪಾಸಣೆ ನಡೆಸಲಾಗುತ್ತಿದೆ.

Join Whatsapp
Exit mobile version