ಚಿಕ್ಕಮಗಳೂರು: ಮನೆಯಲ್ಲಿ ತಯಾರಿಸಿದ್ದ ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ

Prasthutha|

ಚಿಕ್ಕಮಗಳೂರು: ಕುಟುಂಬ ಸಮಾರಂಭದಲ್ಲಿ ಬಿರಿಯಾನಿ ಸೇವಿಸಿದ 17 ಮಂದಿ ಅಸ್ವಸ್ಥಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ನಡೆದಿದೆ. ಅಸ್ವಸ್ಥರಾದವರು ಕಡೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -


ಕಾರ್ಯಕ್ರಮ ನಿಮಿತ್ತ ಮನೆಯಲ್ಲಿ ಸಂಬಂಧಿಕರು ಆಗಮಿಸಿದ್ದರು. ಕಾರ್ಯಕ್ರಮ ಮುಗಿದ ಬಳಿಕ ತಯಾರಿಸಿದ್ದ ಮಾಂಸಹಾರ ಸೇವಿಸಿ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಶಾಸಕ ಕೆ ಎಸ್ ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು.



Join Whatsapp