ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಕಾರಿನಲ್ಲಿದ್ದ ಐದು ಜನ ಪ್ರವಾಸಿಗರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -


ಕೋಲಾರದಿಂದ ಧರ್ಮಸ್ಥಳಕ್ಕೆ ಕಾರಿನಲ್ಲಿ ಹೊರಟಿದ್ದ ಪ್ರವಾಸಿಗರು ಮೂಡಿಗೆರೆ ತಾಲ್ಲೂಕಿನ ಬಣಕಲ್ ಬಳಿ 20 ಅಡಿ ಪ್ರಪಾತಕ್ಕೆ ಪಲ್ಟಿ ಹೊಡೆದಿದೆ ಎಂದು ತಿಳಿದು ಬಂದಿದೆ.