ಚಿಕ್ಕಮಗಳೂರು: SDA ತಿಮ್ಮಯ್ಯ ನಿವಾಸದ ಮೇಲೆ ಎಸಿಬಿ ದಾಳಿ

Prasthutha|

ಚಿಕ್ಕಮಗಳೂರು : ಆದಾಯಕ್ಕಿಂತ 80 ಲಕ್ಷಕ್ಕೂ ಅಧಿಕ ಹಣ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿಕಡೂರು ಪಟ್ಟಣದಲ್ಲಿರುವ  SDA ತಿಮ್ಮಯ್ಯ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

- Advertisement -

ತಿಮ್ಮಯ್ಯ ಕರ್ತವ್ಯ ನಿರ್ವಹಿಸುತ್ತಿದ್ದ ಅಜ್ಜಂಪುರ ಪುರಸಭೆ ಕಚೇರಿ, ತಿಮ್ಮಯ್ಯ ತಂದೆಯ ಬಸೂರು ನಿವಾಸದ ಮೇಲೂ ದಾಳಿ ನಡೆದಿದೆ. ಏಕಕಾಲದಲ್ಲಿ ಮೂರು ಕಡೆ ದಾಳಿ ನಡೆಸಿದ ಡಿವೈಎಸ್ಪಿ ಅನಿಲ್ ರಾಥೋಡ್ ನೇತೃತ್ವದ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.

Join Whatsapp