Home ಟಾಪ್ ಸುದ್ದಿಗಳು ಚಿಕ್ಕಮಗಳೂರು: ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಆಸಿಡ್ ದಾಳಿ!

ಚಿಕ್ಕಮಗಳೂರು: ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಆಸಿಡ್ ದಾಳಿ!

ಚಿಕ್ಕಮಗಳೂರು: ನಾಯಿ ಬೊಗಳಿದ್ದಕ್ಕೆ ಮನೆ ಮಾಲೀಕನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಹಾಳ್ ಕರಗುಂದ ಗ್ರಾಮದಲ್ಲಿ ನಡೆದಿದೆ.

ಜೇಮ್ಸ್ ಆಸಿಡ್ ದಾಳಿ ಮಾಡಿದ ಆರೋಪಿಯಾದರೆ, ಸುಂದರ್ ರಾಜ್ ಆಸಿಡ್ ದಾಳಿಗೊಳಗಾದ ವ್ಯಕ್ತಿ. ಜೇಮ್ಸ್ ಹಾಗೂ ಸುಂದರ್ ರಾಜ್ ಅಕ್ಕಪಕ್ಕದ ಮನೆಯವರು. ಹಲವು ದಿನಗಳಿಂದ ಇಬ್ಬರ ನಡುವೆ ಗಲಾಟೆಯಾಗಿ, ಮನಸ್ಥಾಪವಿತ್ತು. ನಿನ್ನೆ ಸುಂದರ್ ರಾಜ್ ಮನೆಯ ಸಾಕು ನಾಯಿ ಬೊಗಳುತ್ತಿತ್ತು.

ಈ ವೇಳೆ ಮನೆ ಮಾಲೀಕ ಸುಂದರ್ ರಾಜ್ ನಾಯಿಗೆ ಬೈದಿದ್ದಾರೆ. ಆಗ ಜೇಮ್ಸ್ ನಾಯಿಗೆ ಬೈದಂತೆ ನನಗೆ ಬೈಯುತ್ತಿದ್ದಾನೆ ಎಂದು ಜಗಳವಾಡಿದ್ದಾನೆ. ಇಬ್ಬರು ಜಗಳವಾಡುವಾಗ ಜೇಮ್ಸ್ ಏಕಾಏಕಿ ಸುಂದರ್ ರಾಜ್ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ.

Join Whatsapp
Exit mobile version