ಮೂಡಿಗೆರೆ : ಇಬ್ಬರು ದುಷ್ಕರ್ಮಿಗಳು ಬೈಕ್ ನಲ್ಲಿ ಬಂದು ಇನ್ನೋರ್ವ ಬೈಕ್ ಸವಾರನ ಮೇಲೆ ಮಾರಕಾಸ್ತ್ರಗಳಿಂದ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಮೂಡಿಗೆರೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಗೋಣಿಬೀಡು ಆನೇದಿಬ್ಬ ಹತ್ತಿರದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಇನ್ನೊಬ್ಬ ಬೈಕ್ ಚಾಲಕ ಮೇಕನಗದ್ದೆ ಕಿರಣ್ ಎಂಬಾತನ ಮೇಲೆ ಕತ್ತಿಯಿಂದ ಕಡಿದು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ.
ಕಿರಣ್ ಅವರ ಕೈ ಹಾಗೂ ಕಾಲನ್ನು ಕಡಿದು ದುಷ್ಕರ್ಮಿಗಳು ಪರಾರಿಯಾಗಿದ್ದು, ಹಳೆಯ ದ್ವೇಷದ ಹಿನ್ನೆಲೆ ಈ ಘಟನೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಹಲ್ಲೆಗೀಡಾದ ವ್ಯಕ್ತಿಯನ್ನು ಮೂಡಿಗೆರೆಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಗೋಣಿಬೀಡು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣಗಳೇನು ಎಂದು ಪೊಲೀಸರ ಸಂಪೂರ್ಣ ತನಿಖೆಯಿಂದಷ್ಟೇ ತಿಳಿಯಬೇಕಿದೆ.