ಚಿಕ್ಕಮಗಳೂರು: ಹಿಂದು ಯುವತಿಯೊಂದಿಗೆ ಮಾತನಾಡಿದ ಮುಸ್ಲಿಂ ಯುವಕರಿಬ್ಬರನ್ನು ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ ಘಟನೆ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಘಟನೆಯ ವಿಡಿಯೋ ಬಸ್ ನಿಲ್ದಾಣದ ಸಿಸಿಟಿವಿ ಯಲ್ಲಿ ದಾಖಲಾಗಿದೆ.
ಮುನೀರ್, ಸಮೀರ್ ಹಲ್ಲೆಗೊಳಗಾದ ಯುವಕರು. ಅವರನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಡಿಗೆರೆ ಬಸ್ ನಿಲ್ದಾಣಕ್ಕೆ ಕಾರಿನಲ್ಲಿ ಬಂದ ನಾಲ್ವರು ಯುವಕರು ಮುಸ್ಲಿಂ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದಾಗ ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ಸದ್ಯ ಹಲ್ಲೆ ನಡೆಸಿದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ನಾಲ್ವರು ಕೂಡ ಹಿಂದುತ್ವದ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡವರಾಗಿದ್ದಾರೆ.