ಚಿಕ್ಕಮಗಳೂರು: ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ

Prasthutha|

ಚಿಕ್ಕಮಗಳೂರು: ಕಾಫಿನಾಡ ಪ್ರವಾಸಿ ತಾಣ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ 3 ದಿನಗಳ ಕಾಲ ಪ್ರವಾಸಿಗರನ್ನು ನಿಷೇಧಿಸಲಾಗಿದೆ.

- Advertisement -


ದತ್ತಮಾಲಾ ಅಭಿಯಾನದ ಹಿನ್ನೆಲೆ ಪ್ರವಾಸಿಗರಿಗೆ 3 ದಿನ ಗಿರಿ ಭಾಗ ಬಂದ್ ಮಾಡಲಾಗಿದೆ. ನವೆಂಬರ್ 4 ಬೆಳಗ್ಗೆ 6 ಗಂಟೆಯಿಂದ ನವೆಂಬರ್ 6ರ ಬೆಳಗ್ಗೆ 10 ಗಂಟೆಯವರೆಗೆ ಪ್ರವಾಸಿಗರನ್ನು ನಿಷೇಧಿಸಲಾಗಿದೆ.


ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೂ ಪ್ರವಾಸ ನಿಷೇಧಿಸಲಾಗಿದೆ.

Join Whatsapp