ಚಿಕ್ಕಮಗಳೂರು: ಹೇಮಾವತಿ ನದಿಯಲ್ಲಿ ತೇಲುತ್ತಿದ್ದ ವೃದ್ಧೆಯ ಶವ ಪತ್ತೆ

Prasthutha|

►ಧಾರಾಕಾರ ಮಳೆಗೆ ಜಿಲ್ಲೆಯಲ್ಲಿ ಎರಡನೇ ಬಲಿ

- Advertisement -

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದ ಬಳಿ ಇರುವ ಹೇಮಾವತಿ ನದಿಯಲ್ಲಿ ವೃದ್ಧೆಯೊಬ್ಬರ ಶವ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ವೃದ್ಧೆಯನ್ನು ದಾರದಹಳ್ಳಿ ಗ್ರಾಮದ ದೇವಮ್ಮ(61) ಎಂದು ಗುರುತಿಸಿಲಾಗಿದೆ.

- Advertisement -

ಧಾರಾಕಾರ ಸುರಿಯುತ್ತಿರುವ ಮಳೆಗೆ ಜಿಲ್ಲೆಯಲ್ಲಿ ಇದು ಎರಡನೇ ಬಲಿಯಾಗಿದ್ದು, ಭತ್ತದ ಗದ್ದೆಗೆ ತೆರಳುವಾಗ ದೇವಮ್ಮ ಕಾಲು ಜಾರಿ ನದಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಮಳೆಯಿಂದ ಹೇಮಾವತಿ ನದಿಯು ತುಂಬಿ ಹರಿಯುತ್ತಿದ್ದು, ನದಿ ನೀರಿನಲ್ಲಿ ವೃದ್ಧೆ ಕೊಚ್ಚಿ ಹೋಗಿದ್ದಾರೆ.

ನದಿಯ ದಡದಲ್ಲಿ ಸಿಲುಕಿದ್ದ ಶವವನ್ನು ಸ್ಥಳೀಯರು ಮೇಲಕ್ಕೆತ್ತಿದ್ದು, ಮೂಡಿಗೆರೆ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ವೃದ್ಧೆಯ ಸಾವು ಆಕಸ್ಮಿಕವೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಪೊಲೀಸ್ ತನಿಖೆಯಿಂದ ತಿಳಿಯಬೇಕಿದೆ.

Join Whatsapp