ಚಿಕ್ಕಮಗಳೂರು: ಹುಲಿ ದಾಳಿಗೆ ಎತ್ತು ಬಲಿಯಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ದೊಡ್ಡನಂದಿ ಗ್ರಾಮದ ಬೊಮ್ಮನಹಳ್ಳಿ ಎಂಬಲ್ಲಿ ನಡೆದಿದೆ.
ನಾರಾಯಣ ಗೌಡ ಎಂಬುವರು ಸಾಕಿದ್ದ ಎತ್ತನ್ನು ಹುಲಿ ಕೊಂದು ಹಾಕಿದೆ. ಉಪ ವಲಯ ಅರಣ್ಯಾಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೊಹ್ಸಿನ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.