ಚಿಕ್ಕಮಗಳೂರು: ಭಾರತದ ವಿಭಜನೆಯ ಸಂದರ್ಭದಲ್ಲಿ ನಡೆದ ಭೀಕರತೆಯ ಸಂಸ್ಮರಣಾ ದಿನದ ಚಿತ್ರ ಪ್ರದರ್ಶನವನ್ನುನಗರದ ಐ.ಜಿ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕೆನರಾ ಬ್ಯಾಂಕ್ ಪ್ರಾದೇಶಿಕ ಮುಖ್ಯಸ್ಥರಾದ ಅನಿಲ್ ಕುಮಾರ್ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಭಾರತವು ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆದು 75 ವರ್ಷ ಆಗಿದೆ. ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ವತಿಯಿಂದ ಸ್ವಾತಂತ್ರ್ಯ ಪಡೆಯುವ ಮೊದಲು ಮತ್ತು ನಂತರ ನಡೆದ ಭೀಕರ ಘಟನೆಗಳನ್ನು ಪೋಟೋ ಮೂಲಕ ಸಾರ್ವಜನಿಕರಿಗೆ ತಿಳಿಸುವ ಸಣ್ಣ ಪ್ರಯತ್ನ ನಡೆಸಲಾಗುತ್ತಿದೆ. ಸಾರ್ವಜನಿಕರು ಆ ದಿನಗಳಲ್ಲಿ ನಡೆದ ಘಟನಾವಳಿಗಳನ್ನು ಚಿತ್ರದ ಮೂ ಲಕ ನೋಡಿ ತಿಳಿದುಕೊಳ್ಳುಬಹುದು ಎಂದು ಹೇಳಿದರು.
ಸಮಾರಂಭದಲ್ಲಿ ಐ.ಜಿ.ರಸ್ತೆ ಶಾಖೆ ಮುಖ್ಯ ವ್ಯವಸ್ಥಾಪಕರಾದ ಬಾಲಕೃಷ್ಣ, ಕೆನರಾ ಬ್ಯಾಂಕ್ ಜಿಲ್ಲಾ ಮಾಹಿತಿ ವಿಭಾಗದ ವ್ಯವಸ್ಥಾಪಕರದ ಕೋಟಿಶ್ವರಿ ಹಾಗೂ ಸಿಬ್ಬಂದಿಗಳು, ಸಾರ್ವಜನಿಕರು ಹಾಜರಿದ್ದರು.