ಚಿಕ್ಕಮಗಳೂರು| ಮೇ 18 ರಂದು ಮುಖ್ಯಮಂತ್ರಿ ಜಿಲ್ಲಾ ಭೇಟಿ; ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ: ಜಿಲ್ಲಾಧಿಕಾರಿ ಕೆ.ಎನ್ ರಮೇಶ್

Prasthutha|

ಚಿಕ್ಕಮಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಇದೇ ತಿಂಗಳು 18 ರಂದು ಚಿಕ್ಕಮಗಳೂರಿಗೆ ಆಗಮಿಸಲಿದ್ದು, ಜಿಲ್ಲೆಯ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.

- Advertisement -

ಈ ಬಗ್ಗೆಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ವಿವಿಧ ಇಲಾಖೆಗಳ ಅಭಿವೃದ್ಧಿ ಯೋಜನೆಗಳನ್ನು ವರ್ಚುವಲ್ ಆಗಿ ಮುಖ್ಯಮಂತ್ರಿ ಉದ್ಘಾಟಿಸಲಿದ್ದು, ಈ ಸಂಬಂಧ ಎಲ್ಲಾ ಇಲಾಖೆಗಳು ತಮ್ಮ ಯೋಜನೆಗಳ ವರದಿ, ಹಿನ್ನೆಲೆ, ಅನುದಾನ, ವೆಚ್ಚ, ಫಲಾನುಭವಿಗಳು, ಸಮಸ್ಯೆಗಳು ಮುಂತಾದ ಸಂಪೂರ್ಣ ಮಾಹಿತಿ ಹಾಗೂ ಅವುಗಳಿಗೆ ಸಂಬಂಧಿಸಿದ ಛಾಯಾಚಿತ್ರಗಳೊಂದಿಗೆ ತಯಾರಿರಬೇಕು ಎಂದು ಸೂಚಿಸಿದರು.

ಮುಖ್ಯಮಂತ್ರಿಗಳು ಬೆಳಿಗ್ಗೆ 11 ಗಂಟೆಗೆ ಚಿಕ್ಕಮಗಳೂರಿಗೆ ಆಗಮಿಸಲಿದ್ದು, ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಬಸವ ತತ್ವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

- Advertisement -

ಮುಖ್ಯಮಂತ್ರಿಗಳು ಜಿಲ್ಲಾದ್ಯಂತ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹೆಚ್, ಭದ್ರಾ ಹುಲಿ ಸಂರಕ್ಷಿತಾ ಅರಣ್ಯದ ಅರಣ್ಯಾಧಿಕಾರಿ ಪ್ರಭಾಕರನ್ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Join Whatsapp