ಚಿಕ್ಕಮಗಳೂರು: ಡೆಂಗ್ಯೂ ಜ್ವರ ಬಾಧೆಗೆ ಬುಧವಾರ ರಾತ್ರಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಸಹನಾ ಬಾನು (18) ಎಂದು ಗುರುತಿಸಲಾಗಿದೆ.
ಇವರು ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ಬಡಾವಣೆ ನಿವಾಸಿ. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಸಹನಾ ಬಾನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಸಹನಾ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.