ಚಿಕ್ಕಮಗಳೂರು: ‘ಆರ್.ಎಸ್.ಎಸ್ ಚಡ್ಡಿ’ ಸುಟ್ಟು ಕಾಂಗ್ರೆಸ್ ನಾಯಕರ ಪ್ರತಿಭಟನೆ

Prasthutha|

ಚಿಕ್ಕಮಗಳೂರು : ಎನ್.ಎಸ್.ಯು.ಐ. ರಾಜ್ಯಾಧ್ಯಕ್ಷ ಸೇರಿದಂತೆ  ಕಾರ್ಯಕರ್ತರ ಬಂಧನವನ್ನು ಖಂಡಿಸಿ ನಗರದ ಆಜಾದ್ ಪಾರ್ಕ್ ಬಳಿ   ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

- Advertisement -

ಎನ್.ಎಸ್.ಯು.ಐ. ಕಾರ್ಯಕರ್ತರ ಬಿಡುಗಡೆಗೆ ಆಗ್ರಹಿಸಿ ಸ್ಥಳೀಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಆರ್.ಎಸ್.ಎಸ್ ಚಡ್ಡಿ ಸುಟ್ಟು ,ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಪಠ್ಯಪರಿಷ್ಕರಣೆ ವಿರೋಧಿಸಿ ಇತ್ತೀಚೆಗೆ ತುಮಕೂರಿನಲ್ಲಿ ಸಚಿವ ನಾಗೇಶ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ಎನ್ ಎಸ್ ಯುಐ ಕಾರ್ಯಕರ್ತರು ಖಾಕಿ ಚಡ್ಡಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಇವರ ವಿರುದ್ಧ ಪೊಲೀಸರು ಜಾಮೀನುರಹಿತ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ಚಿಕ್ಕಮಗಳೂರಿನಲ್ಲಿ ಚಡ್ಡಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.



Join Whatsapp