ಕಳಸ: ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಹರಪನಹಳ್ಳಿ ಮೂಲದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಕಳಸ ತಾಲೂಕಿನ ಹೊರನಾಡಿನಲ್ಲಿ ನಡೆದಿದೆ.
- Advertisement -
ಹೂವಿನ ಹಿತ್ತಲು ಗ್ರಾಮದ ಪ್ರಿಯಾಂಕ (22) ಮೃತ ದುರ್ದೈವಿ. ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಮರ ಬಿದ್ದು ಸಾವನ್ನಪ್ಪಿದ್ದಾರೆ. ಕಳಸ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು.