ಚಿಕ್ಕಮಗಳೂರು | ದಲಿತನ ಮೇಲೆ ಹಲ್ಲೆ: ನಾಲ್ವರ ಬಂಧನ

Prasthutha|

ಚಿಕ್ಕಮಗಳೂರು: ದಲಿತ ಯುವಕನ ಮೇಲೆ ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಶಿವರಾಮ್, ರಾಜಪ್ಪ, ಶಂಕರ್, ತಮ್ಮಯ್ಯ ಬಂಧಿತ ಆರೋಪಿಗಳು.

ಜನವರಿ 1 ರಂದು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಗೇರಮರಡಿ ಗ್ರಾಮದ ಗೊಲ್ಲರ ಬೀದಿಗೆ ದಲಿತ ಯುವಕ ಮಾರುತಿ ಜೆಸಿಬಿ ಜೊತೆ ಕೆಲಸಕ್ಕೆ ಬಂದಿದ್ದನು. ಮಾರುತಿ ದಲಿತ ಯುವಕ ಎಂದು ತಿಳಿಯುತ್ತಿದ್ದಂತೆ ಗೊಲ್ಲರ ಬೀದಿ ನಿವಾಸಿಗಳು ಆತನ ಮೇಲೆ ಹಲ್ಲೆ ನಡೆಸಿದ್ದರು.

- Advertisement -

ತಲೆಮರೆಸಿಕೊಂಡ 11ಜನರ ಬಂಧನಕ್ಕೆ ಡಿವೈಎಸ್ ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.

Join Whatsapp