Home ಟಾಪ್ ಸುದ್ದಿಗಳು ಚಿಕ್ಕಮಗಳೂರು : ಕೊಕನ್ ಜ್ಯೂಸ್ ಮಾರಾಟ ನೆಪದಲ್ಲಿ ಗಾಂಜಾ ಸಾಗಾಟ; ಬೆಳ್ತಂಗಡಿಯ ಓರ್ವ ಸಹಿತ ಮೂವರ...

ಚಿಕ್ಕಮಗಳೂರು : ಕೊಕನ್ ಜ್ಯೂಸ್ ಮಾರಾಟ ನೆಪದಲ್ಲಿ ಗಾಂಜಾ ಸಾಗಾಟ; ಬೆಳ್ತಂಗಡಿಯ ಓರ್ವ ಸಹಿತ ಮೂವರ ಬಂಧನ.

ಮೂಡಿಗೆರೆ : ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಕುಕ್ಕಾವು ಮನೆಯೊಂದರಲ್ಲಿ ಕೊಕನ್ ಜ್ಯೂಸ್ ತಯಾರಿಸಿ ಮೂಡಿಗೆರೆ‌ ಕಡೆ ಕ್ವಾಲಿಸ್ ಕಾರಿನಲ್ಲಿ ಕೊಕನ್ ಜ್ಯೂಸ್ ಮಾರಾಟ ಮಾಡುವ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಗ್ಯಾಂಗ್ ನ್ನು ಬಂಧಿಸುವಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸರು ಯಶಸ್ವಿಯಾಗಿದ್ದಾರೆ.

 ಬಂಧಿತ ಆರೋಪಿಗಳನ್ನುಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಕುಕ್ಕಾವು ನಿವಾಸಿ ಅಬೂಬಕ್ಕರ್ ಸಿದ್ದಿಕ್(31) , ಮೂಡಿಗೆರೆಯ ಅಮೃತ್ ಬಿಜುವಳ್ಳಿ , ಮೂಡಿಗೆರೆ ಟೌನ್ ನಿವಾಸಿ ರಿಷಬ್ ರಾಜ್ ಎಂದು ಗುರುತಿಸಲಾಗಿದೆ.

ಬೆಳ್ತಂಗಡಿಯ ಅಬೂಬಕ್ಕರ್ ಸಿದ್ದಿಕ್ ಗೆ ಸೇರಿದ ಕ್ವಾಲಿಸ್ ಕಾರಿನಲ್ಲಿ 250 ಗ್ರಾಂ ಗಾಂಜಾ ಪತ್ತೆ ಹಚ್ಚಲಾಗಿದ್ದು, ಒಂದು ಬೈಕ್ ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ‌. ಕಾರ್ಯಾಚರಣೆಯಲ್ಲಿ ಮೂಡಿಗೆರೆ ಸರ್ಕಲ್ ಇನ್ಸ್ಪೆಕ್ಟರ್ ಸೋಮಶೇಖರ್, ಗಿರೀಶ್ BC, ಸುರೇಶ್, ಜಯಕುಮಾರ್, ಪ್ರದೀಪ್, ಉಮೇಶ್, ಮನುಕುಮಾರ್ ಇದ್ದರು.

Join Whatsapp
Exit mobile version