ಚಿಕ್ಕಮಗಳೂರು: ಡೆಂಗ್ಯೂ ಜ್ವರದಿಂದ ಬಾಲಕಿ ಮೃತ್ಯು

Prasthutha|

ಚಿಕ್ಕಮಗಳೂರು: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ.

- Advertisement -


ಸಖರಾಯಪಟ್ಟಣದ ಆಸಿಫ್ ಎಂಬವರ ಪುತ್ರಿ ಸಾನಿಯಾ(6) ಮೃತರು.


ಡೆಂಗ್ಯೂನಿಂದ ಬಳಲುತ್ತಿದ್ದ ಸಾನಿಯಾಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

- Advertisement -


ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ವ್ಯಾಪಕವಾಗಿ ಹರಡುತ್ತಿದೆ. ಸರಕಾರ ಈ ಬಗ್ಗೆ ಗಮನಹರಿಸಬೇಕು. ನನ್ನ ಮಗಳಿಗಾದ ಸ್ಥಿತಿ ಬೇರೆ ಯಾರಿಗೂ ಆಗಬಾರದು ಎಂದು ಸಾನಿಯಾರ ತಂದೆ ಆಸಿಫ್ ಹೇಳಿದ್ದಾರೆ.
ನನಗೆ ಯಾವುದೇ ಸಹಾಯ ಬೇಡ, ಆದರೆ ಸರಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿ ಮಾಡಿ ಎಂದು ಮನವಿ ಮಾಡಿದ್ದಾರೆ.



Join Whatsapp