ಚಿಕ್ಕಮಗಳೂರು: ಬಿರುಗಾಳಿ ಸಹಿತ ಭಾರೀ ಮಳೆ; ಅಪಾರ ಬೆಳೆ ಹಾನಿ, ಜನಜೀವನ ಅಸ್ತವ್ಯಸ್ತ

Prasthutha|

ಚಿಕ್ಕಮಗಳೂರು : ರಾತ್ರಿ ಸುರಿದ ಭಾರೀ ಮಳೆಗೆ ಕಡೂರು ತಾಲೂಕಿನ ಬ್ರಹ್ಮಸಮುದ್ರ ಗ್ರಾಮದಲ್ಲಿ ಅಪಾರ ಪ್ರಮಾಣದ ಬೆಳೆ ನಾಶ ಸಹಿತ ಅನಾಹುತಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ.

- Advertisement -

ರಭಸವಾದ ಬಿರುಗಾಳಿ ಮತ್ತು ಮಳೆಯ ಆರ್ಭಟಕ್ಕೆ ವಿದ್ಯುತ್ ಕಂಬಗಳು ಧರಶಾಹಿಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಟೊಮೊಟೊ ಬೆಳೆ

ಅಡಿಕೆ, ತೆಂಗಿನ ಮರಗಳು ಧರೆಗುರುಳಿದ್ದು, ಟೊಮೊಟೊ ಬೆಳೆ ಸಹಿತ ಹಲವು ರೈತರ ಬೆಳೆಗಳು ಕೂಡಾ ಹಾನಿಗೊಳಗಾಗಿವೆ. ಸೂಕ್ತ ಪರಿಹಾರ ಒದಗಿಸುವಂತೆ ರೈತರು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ



Join Whatsapp