Home ಟಾಪ್ ಸುದ್ದಿಗಳು ಚಿಕ್ಕಮಗಳೂರು : ಮಲೆನಾಡಲ್ಲಿ ಮಳೆ ಅಬ್ಬರಕ್ಕೆ ಭಾರೀ ನಷ್ಟ

ಚಿಕ್ಕಮಗಳೂರು : ಮಲೆನಾಡಲ್ಲಿ ಮಳೆ ಅಬ್ಬರಕ್ಕೆ ಭಾರೀ ನಷ್ಟ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ 24 ಗಂಟೆಯಲ್ಲಿ 29ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, 4 ಹಸುಗಳು ಸಾವಿಗೀಡಾಗಿವೆ.

ತರೀಕೆರೆ ತಾಲೂಕಿನ ಸೀತಾಪುರ ಕಾವಲ್ ನಲ್ಲಿ  ಮನೆಯ ಮೇಲ್ಛಾವಣಿ ಸಮೇತ ಘಟನೆ ಗೋಡೆ ಕುಸಿದು ಬಿದ್ದಿದ್ದು, ವಳ್ಳಿಯಮ್ಮ ಎಂಬ ಮಹಿಳೆ  ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾಗಿದ್ದಾರೆ.

ಕಾಫಿನಾಡ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಬಯಲುಸೀಮೆ ಕಡೂರು, ತರೀಕೆರೆಯಲ್ಲೂ ಭಾರೀ ಮಳೆ ಸುರಿಯುತ್ತಿದೆ. ಕಳಸ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿಯಲ್ಲೂ ಮಳೆ ಮುಂದುವರಿದಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version