Home ಟಾಪ್ ಸುದ್ದಿಗಳು ಚಿಕ್ಕಮಗಳೂರು : ಕಾಡ್ಗಿಚ್ಚಿನಿಂದ ಸುಟ್ಟು ಕರಕಲಾದ ನೂರಾರು ಎಕರೆ ಅರಣ್ಯ

ಚಿಕ್ಕಮಗಳೂರು : ಕಾಡ್ಗಿಚ್ಚಿನಿಂದ ಸುಟ್ಟು ಕರಕಲಾದ ನೂರಾರು ಎಕರೆ ಅರಣ್ಯ

ಮೂಡಿಗೆರೆ: ಕಾಡ್ಗಿಚ್ಚಿಗೆ ನೂರಾರು ಎಕರೆ ಅರಣ್ಯ ಆಹುತಿಯಾದ ಘಟನೆ ತಾಲೂಕಿನ ಚಾರ್ಮಾಡಿ ಘಾಟಿಯ ಸೋಮನಕಾಡು ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಬಾಳೂರು ಮೀಸಲು ಅರಣ್ಯದ ಚಾರ್ಮಾಡಿ ಘಾಟ್ ನಲ್ಲಿ ಹಬ್ಬಿದ ಬೆಂಕಿಗೆ  ನೂರಾರು ಎಕರೆ ಅರಣ್ಯ ಸುಟ್ಟು ಕರಕಲಾಗಿದ್ದು, ಬೆಂಕಿ ನಂದಿಸಲು ಅರಣ್ಯಾಧಿಕಾರಿಗಳು ಹರಸಾಹಸ ಪಟ್ಟಿದ್ದಾರೆ.

ಯಾರೋ ಕಿಡಿಗೇಡಿಗಳು ಬೆಂಕಿ ಹಾದ್ದಾರೆ ಎಂದು ಅರಣ್ಯಾಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version