ಚಿಕ್ಕಮಗಳೂರು: ಮನೆ ಮೇಲೆ ಮರ ಬಿದ್ದು ಇಬ್ಬರು ಮೃತಪಟ್ಟ ಕೆ.ತಲಗೂರು ಗ್ರಾಮಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶುಕ್ರವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಇಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಪ್ಪಿತ್ತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.
ಶಾಸಕ ಕುಮಾರಸ್ವಾಮಿ ಮಾತನಾಡಿ, ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮನೆ ಮೇಲೆ ಬೀಳುವ ಮರಗಳನ್ನು ಕಡಿಯುವಂತೆ ಸೂಚಿಸಲಾಗಿತ್ತು. ಅರಣ್ಯ ಅಧಿಕಾರಿಗಳು ಕಡಿಯಬೇಕು ಅಥವಾಸ್ಥಳಿಯರಿಗೆ ಕಡಿಯಲು ಅವಕಾಶ ನೀಡಬೇಕು ಎಂದು ತಿಳಿಸಲಾಗಿತ್ತು ಎಂದು ಕೇಂದ್ರ ಸಚಿವೆ ಶೋಭಾಗೆ ಸಾಥ್ ನೀಡಿದರು.