ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಇನೋವಾ ಕಾರ್ ಪಲ್ಟಿ, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Prasthutha|

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರೊಂದು 20 ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಚಾರ್ಮಾಡಿ ಘಾಟ್ ನ ಬಿದಿರುತಳ ಸಮೀಪ ನಡೆದಿದೆ.

- Advertisement -

ಸಿಗಂದೂರಿನಿಂದ ಧರ್ಮಸ್ಥಳ ಕ್ಕೆ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಕಾರಿನಲಿದ್ದವರಿಗೆ  ಸಣ್ಣ ಪುಟ್ಟ ಗಾಯಾಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಧಾವಿಸಿದ ಬಣಕಲ್ ಠಾಣೆಯ  ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp