ಚಿಕ್ಕಮಗಳೂರು: ಇನೋವಾ ಕಾರ್ ಪಲ್ಟಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Prasthutha|

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರೊಂದು ರಾಷ್ಟ್ರೀಯ ಹೆದ್ದಾರಿಯಿಂದ ಪಕ್ಕದ ಗದ್ದೆಗೆ ಉರುಳಿದ ಘಟನೆ ಕೊಟ್ಟಿಗೆಹಾರ ಮತ್ತು ಬಣಕಲ್ ಹೆದ್ದಾರಿಯ ಮಧ್ಯೆ ಹೆಬ್ಬರಿಗೆ ಸಮೀಪ ನಡೆದಿದೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ  ಬಂದ ಆರು ಪ್ರವಾಸಿಗರು ಇನೋವಾ ಕಾರಿನಲ್ಲಿದ್ದರು. ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟ ವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Join Whatsapp