ಚಿಕ್ಕಮಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನಲೆ ಚುನಾವಣಾ ಅಕ್ರಮ ತಡೆಯಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚೆಕ್ಪೋಸ್ಟ್ಗಳನ್ನ ನಿರ್ಮಿಸಿದೆ.
ಅದರಂತೆ ಇದೀಗ ಕಡೂರು ಜೆ.ಡಿ.ಎಸ್ ಅಭ್ಯರ್ಥಿ ಧನಂಜಯ ಅವರಿಗೆ ಸೇರಿದ ಕಾರಿನಲ್ಲಿದ್ದ 9ಲಕ್ಷ ರೂಪಾಯಿ ಹಣವನ್ನ ತಾಲೂಕಿನ ಬಸವನಹಳ್ಳಿ ದಿಬ್ಬದ ಚೆಕ್ ಪೋಸ್ಟ್ನಲ್ಲಿ ವಶಕ್ಕೆ ಪಡೆಯಲಾಗಿದೆ.
ಚುನಾವಣೆಗೆ ಬಳಸಲು ಕೊಂಡೊಯ್ಯುತ್ತಿದ್ದ ದಾಖಲೆ ಇಲ್ಲದ 9 ಲಕ್ಷ ಅಕ್ರಮ ಹಣವನ್ನ ವಶಕ್ಕೆ ಪಡೆಯಲಾಗಿದ್ದು, ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ 24 ಗಂಟೆಗಳಲ್ಲಿ ಚುನಾವಣಾ ಆಯೋಗ ರಾಜ್ಯಾದ್ಯಂತ 17.36 ಕೋಟಿ ರೂ. ಹಣ ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದೆ. ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೆ ಆಯೋಗ 126.14 ಕೋಟಿ ರೂ. ಹಣ ಮತ್ತು ವಸ್ತುಗಳನ್ನು ಜಪ್ತಿ ಮಾಡಿದೆ.