ಚಿಕ್ಕಮಗಳೂರು: ರಾತ್ರೋ ರಾತ್ರಿ ಬೈಕ್ ಎಗರಿಸುತ್ತಿದ್ದ ಖತರ್ನಾಕ್ ಕಳ್ಳ ಅರೆಸ್ಟ್

Prasthutha|

ಕಡೂರು: ರಾತ್ರೋ ರಾತ್ರಿ ಬೈಕ್ ಎಗರಿಸುತ್ತಿದ್ದ ಖತರ್ನಾಕ್ ಕಳ್ಳನನ್ನು ಕಡೂರು ಸಿಪಿಐ ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.

- Advertisement -

ತಾಲೂಕಿನ ಶೆಟ್ಟಿಹಳ್ಳಿಯ ಮೋಹನ್ ಬಂಧಿತ ಆರೋಪಿ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನದ ಬಗ್ಗೆ ಪ್ರಕರಣ ದಾಖಲಾಗಿತ್ತು.

 ಖಚಿತ ಮಾಹಿತಿ ಮೇರೆಗೆ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿ ಬೆಂಗಳೂರು, ತುಮಕೂರು ಸೇರಿ ವಿವಿದ ಜಿಲ್ಲೆಯ 11 ಪ್ರಕರಣಗಳನ್ನು ಬಯಲಿಗೆಳೆದಿದ್ದಾರೆ.

- Advertisement -

ಆರೋಪಿ  ಮೋಹನ್ ಬೈಕ್ ಕಳ್ಳತನ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದು, ಬಂಧಿತನಿಂದ 4 ಲಕ್ಷ ಮೌಲ್ಯದ 11 ಬೈಕ್ ವಶಪಡಿಸಿಕೊಳ್ಳಲಾಗಿದೆ.

Join Whatsapp