ಚಿಕ್ಕಮಗಳೂರು: ಮೋದಿ ಗೋ ಬ್ಯಾಕ್ ಘೋಷಣೆ ಕೂಗಲು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದವರ ಬಂಧನ

Prasthutha|

ಚಿಕ್ಕಮಗಳೂರು: ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿ ವಿರುದ್ಧ ಪ್ರತಿಭಟಿಸಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.

- Advertisement -

‘ಮೋದಿ ಗೋ ಬ್ಯಾಕ್ ‘ ಘೋಷಣೆ ಕೂಗಲು ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಬೆಳಗ್ಗೆ  ಬೆಂಗಳೂರು ಏರ್ ಪೋರ್ಟ್ ಕಡೆಗೆ ತೆರಳಲು ನಿರ್ಧರಿಸಿದ್ದರು. ಇದಕ್ಕಾಗಿ ಚಿಕ್ಕಮಗಳೂರಿನ ಪ್ರವಾಸಿ ಮಂದಿರದ ಬಳಿ ಕೆಪಿಸಿಸಿ ಕಿಸಾನ್ ಸೆಲ್ ಅಧ್ಯಕ್ಷ ಸೇರಿದಂತೆ 10ಕ್ಕೂ ಹೆಚ್ಚು ವಾಹನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೇರಿದ್ದರು. ಮಾಹಿತಿ ಅರಿತ ಪೊಲೀಸರು, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪ್ರವಾಸಿ ಮಂದಿರದ ಬಳಿ ವಶಕ್ಕೆ ಪಡೆದು ಬಂಧಿಸಿದ್ದಾರೆ.

ಈ ವೇಳೆ ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.



Join Whatsapp