ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಕೆಂಚೇನಹಳ್ಳಿಯಲ್ಲಿ ನಡೆದಿದೆ.
ತೋಟಕ್ಕೆ ತೆರಳುತ್ತಿದ್ದ ಕಾರ್ಮಿಕ ಶ್ರೀಧರ್ ಎಂಬುವವರ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು, ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಇನ್ನು ಮೃತ ಕಾರ್ಮಿಕ ಶ್ರೀಧರ್, ತಮಿಳುನಾಡು ಮೂಲದವನಾಗಿದ್ದು, ಕಾಫಿ ತೋಟದ ಕೆಲಸಕ್ಕೆ ಕುಟುಂಬ ಸಮೇತ ಬಂದಿದ್ದ ಎನ್ನಲಾಗಿದೆ.