ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆ ಸಂಪರ್ಕಿಸುವ ಚಾರ್ಮಡಿ ಘಾಟ್ ಸೋಮನ ಕಾಡು ಸಮೀಪ ಲಘು ಭೂಕುಸಿತವುಂಟಾಗಿದೆ.
ಹೆದ್ದಾರಿ ಪ್ರಾಧಿಕಾರದ ಜೆಸಿಬಿ ಯಂತ್ರಗಳಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ತಿಳಿದು ಬಂದಿದೆ.