Home ಟಾಪ್ ಸುದ್ದಿಗಳು ಚಿಕ್ಕಮಗಳೂರು: ನಕ್ಸಲ್ ಸುರೇಶ್ ಬಂಧನ

ಚಿಕ್ಕಮಗಳೂರು: ನಕ್ಸಲ್ ಸುರೇಶ್ ಬಂಧನ

ಚಿಕ್ಕಮಗಳೂರು : ಇಪ್ಪತ್ತು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಮೂಡಿಗೆರೆಯ ಅಂಗಡಿ ಗ್ರಾಮದ ನಕ್ಸಲ್ ಸುರೇಶ್ ಎಂಬ ವ್ಯಕ್ತಿಯನ್ನು ಕೇರಳದ ಕಣ್ಣೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.


ಕಣ್ಣೂರು ಅರಣ್ಯದ ನಕ್ಸಲ್ ಕ್ಯಾಂಪ್ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಕಾಡಾನೆ ದಾಳಿಯಿಂದ ನಕ್ಸಲ್ ಸುರೇಶ್ ಗಾಯಗೊಂಡಿದ್ದ. ಹೀಗಾಗಿ ಸುರೇಶ್ಗೆ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ವಿಚಾರ ಇಳಿದು ದಾಳಿ ನಡೆಸಿದ ಪೊಲೀಸರು ಸುರೇಶ್ ನನ್ನು ಬಂಧಿಸಿದ್ದಾರೆ.


ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್, ಕಳೆದ 10 ವರ್ಷಗಳಿಂದ ಭೂಗತ ನಕ್ಸಲ್ ಆಗಿದ್ದಾನೆ. ಪೊಲೀಸ್ ಇಲಾಖೆ, ಸುರೇಶ್ ಮಾಹಿತಿ ನೀಡಿದವರಿಗೆ 5 ಲಕ್ಷ ಬಹುಮಾನ ಘೋಷಣೆ ಮಾಡಿತ್ತು. ಕೇರಳ ಕರ್ನಾಟಕ ಗಡಿ ಪ್ರದೇಶದ ಅರಣ್ಯದಲ್ಲಿ ಸುರೇಶ್ ಅಡಗಿದ್ದ. ಸುರೇಶ್ ವಿರುದ್ಧ ಚಿಕ್ಕಮಗಳೂರು ಉಡುಪಿಯ ಶಿವಮೊಗ್ಗ ಜಿಲ್ಲೆಯಲ್ಲಿ ಕೇಸ್ ದಾಖಲಾಗಿವೆ.

Join Whatsapp
Exit mobile version