ಚಿಕ್ಕಮಗಳೂರು | ನಿಫಾ ವೈರಸ್ ಭೀತಿ: ಕೇರಳ ಪ್ರವಾಸಿಗರಿಗೆ ನಿಷೇಧ

Prasthutha|

ಚಿಕ್ಕಮಗಳೂರು: ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲಾಡಳಿತ ಮಂಡಳಿ ಮತ್ತು ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ವೈರಸ್ ಹರಡುವುದನ್ನು ತಡೆಯಲು ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

- Advertisement -


ಕೇರಳ ಮಲೆನಾಡು ಪ್ರದೇಶ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವುದರಿಂದ ಜಿಲ್ಲೆಯಲ್ಲಿ ನಿಫಾ ವೈರಸ್ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೇರಳ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಕೇರಳ ರಾಜ್ಯದಿಂದ ಬರುವ ಪ್ರವಾಸಿಗರಿಗೆ ಅವಕಾಶ ನಿರಾಕರಿಸುವಂತೆ ಜಿಲ್ಲೆಯಲ್ಲಿರುವ ಎಲ್ಲಾ ರೆಸಾರ್ಟ್’ಗಳು, ಹೋಂಸ್ಟೇಗಳು ಮತ್ತು ಹೋಟೆಲ್ ಮಾಲೀಕರಿಗೆ ಜಿಲ್ಲಾಡಳಿತ ಮಂಡಳಿ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.