ಕೊಟ್ಟಿಗೆಹಾರ: ಲಕ್ಷಾಂತರ ವೆಚ್ಚದಲ್ಲಿ ನಿರ್ಮಿಸಿದ ತಡೆ ಗೋಡೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ತಡೆಗೋಡೆ ಕುಸಿದು ಬಿದ್ದ ಘಟನೆ ಮೂಡಿಗೆರೆ ತಾಲುಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಅತ್ತಿಗೆರೆ ತಿರುವಿನ ಸಮೀಪ ಹೆದ್ದಾರಿಯಲ್ಲಿ ನಿರ್ಮಿಸಿದ ರಸ್ತೆಯ ತಡೆ ಗೋಡೆ ಕುಸಿದು ಬಿದ್ದಿದ್ದು, ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.