ಚಿಕ್ಕಮಗಳೂರು: ರೌಡಿಶೀಟರ್ ಹಂದಿ ಅಣ್ಣಿ ಹತ್ಯೆ; ಪೊಲೀಸರ ಮುಂದೆ ಶರಣಾದ ಆರೋಪಿಗಳು

Prasthutha|

ಚಿಕ್ಕಮಗಳೂರು: ಕಳೆದ ಕೆಲವು ದಿನಗಳ ಹಿಂದೆ ನಡು ರಸ್ತೆಯಲ್ಲಿ ರೌಡಿಶೀಟರ್ ಹಂದಿ ಅಣ್ಣಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಗಳು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಶರಣಾಗಿದ್ದಾರೆ.

- Advertisement -

ಹಾಡಹಗಲೇ ಶಿವಮೊಗ್ಗದ ನಡು ರಸ್ತೆಯಲ್ಲಿ ಹಂದಿ ಅಣ್ಣಿಯನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಬಳಿಕ ಪೊಲೀಸರು ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದರು. ಈ ಮಧ್ಯೆ ನಿನ್ನೆ ತಡರಾತ್ರಿ ಹಂದಿ ಅಣ್ಣಿಯನ್ನು ಹತ್ಯೆ ಮಾಡಿದ್ದ ಆರೋಪಿಗಳು ಚಿಕ್ಕಮಗಳೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಅವರ ಕಛೇರಿಗೆ ಬಂದು ಕೊಲೆ ನಡೆಸಿರುವುದಾಗಿ ಒಪ್ಪಿಕೊಂಡಿರುವ ಆರೋಪಿಗಳು ಸದ್ಯ ಚಿಕ್ಕಮಗಳೂರು ಪೊಲೀಸರ ವಶದಲ್ಲಿದ್ದು, ವಿಚಾರಣೆಯ ಬಳಿಕ  ಹೆಚ್ಚಿನ ಮಾಹಿತಿಗಳು ಲಭ್ಯವಾಗಲಿವೆ.

Join Whatsapp