Home ಟಾಪ್ ಸುದ್ದಿಗಳು ಚಿಕ್ಕಮಗಳೂರು: ಕಾಡಾನೆ ಉಪಟಳ, ಹಲವು ಗ್ರಾಮಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು: ಕಾಡಾನೆ ಉಪಟಳ, ಹಲವು ಗ್ರಾಮಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಹೇರಿ ಜಿಲ್ಲಾಡಳಿತ ಭಾನುವಾರ ಆದೇಶ ಹೊರಡಿಸಿತ್ತು.

ಇದೀಗ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆ ಕಾಲೇಜುಗಳಿಗೂ ರಜೆ ಘೋಷಣೆ ಮಾಡಿದೆ. ಸಂಭಾವ್ಯ ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.


ಚಿಕ್ಕಮಗಳೂರು ಜಿಲ್ಲೆಯ ವಸ್ತಾರೆ, ಮೂಗ್ತಿಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಹೀಗಾಗಿ ವಸ್ತಾರೆ, ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. 2 ಗ್ರಾಮ ಪಂಚಾಯಿತಿ ವ್ಯಾಪ್ತಿಯ 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಗ್ರಾಮಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕಾಡಾನೆಗಳ ಹಾವಳಿಗೆ ಕಾಫಿ, ಮೆಣಸು, ಬಾಳೆ ಬೆಳೆ ಸಂಪೂರ್ಣ ನಾಶವಾಗುತ್ತಿವೆ. ಸದ್ಯ ಮಾರಿಕಟ್ಟೆ ಗ್ರಾಮದ ಕಾಫಿತೋಟದಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ.

Join Whatsapp
Exit mobile version