ಚಿಕ್ಕಮಗಳೂರು : ದೇಶಾದ್ಯಂತ SDPI ಮತ್ತು PFI ಕಾರ್ಯಕರ್ತರ ಮನೆ ಮೇಲೆ ದಾಳಿನಡೆಸಿದ್ದು, ಚಿಕ್ಕಮಗಳೂರಿನ ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಸೇರಿದಂತೆ 10ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳವಾರ ಮುಂಜಾನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಗೌಸ್ ಮುನೀರ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಮಾಜಿ ಜಿಲ್ಲಾಧ್ಯಕ್ಷ ಇಮ್ರಾನ್ ಸೇರಿದಂತೆ 10ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಸವನಹಳ್ಳಿ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.